NationalPolitics

*ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್*

ಪ್ರಗತಿವಾಹಿನಿ ಸುದ್ದಿ: ಜಾಮೀನಿನ ಮೇಲೆ ಹೊರ ಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ದೆಹಲಿಯ ಆಪ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಆರೋಪಗಳನ್ನು ಹೊತ್ತು ಮುಂದುವರೆಯಲು ಇಷ್ಟಪಡಲ್ಲ. ನಾನು ಪ್ರಾಮಾಣಿಕವಾಗಿದ್ದರೆ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡಿ ಎಂದು ಕರೆ ನೀಡಿದ್ದಾರೆ.

ನವೆಂಬರ್ ನಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಸುವ ಬಗ್ಗೆ ಒತ್ತಾಯ ಕೇಳಿಬರುತ್ತಿದೆ. ಇನ್ನೆರಡು ದಿನಗಳಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಜನಾಶೀರ್ವಾದದಿಂದ ಮತ್ತೊಮ್ಮೆ ಆಯ್ಕೆಯಾಗುವ ಭರವಸೆಯಿದೆ. ಕೇಜ್ರಿವಾಲ್ ಪ್ರಾಮಾಣಿಕನಾಗಿದ್ದರೆ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡಿ ಗೆಲ್ಲಿಸಿ ಎಂದು ತಿಳಿಸಿದ್ದಾರೆ.

Related Articles

Back to top button