*ದೆಹಲಿ ಜನರ ಆದೇಶವನ್ನು ಸ್ವಾಗತಿಸುತ್ತೇವೆ: ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ:27 ವರ್ಷಗಳ ಬಳಿಕ ದೆಹಲಿ ಗದ್ದಿಗೆ ಬಿಜೆಪಿ ಪಾಲಾಗಿದ್ದು, ಆಡಳಿತಾರೂಢ ಆಪ್ ಹೀನಾಯವಾಗಿ ಸೋತಿದೆ. ಆದರೆ ಕಾಂಗ್ರೆಸ್ ರಾಜ್ಯ ರಾಜದಾನಿಯಲ್ಲಿ ಒಂದೇ ಒಂದು ಸ್ಥಾನವನ್ನು ಕೂಡಾ ಗೆಲ್ಲುವಲ್ಲಿ ಯಶಸ್ವಿಯಾಗಿಲ್ಲ. ಹೀಗಾಗಿ ನಾವು ದೆಹಲಿಯ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ
ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಬರೆದಿರುವ ಅವರು, ನಾವು ದೆಹಲಿಯ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮರ್ಪಣಾ ಮನೋಭಾವಕ್ಕೆ ಮತ್ತು ಬೆಂಬಲಿಸಿದ ಎಲ್ಲಾ ಮತದಾರರಿಗೆ ಹೃತ್ತೂರ್ವಕ ಧನ್ಯವಾದಗಳು.
ದೆಹಲಿಯ ಪ್ರಗತಿ ಮತ್ತು ದೆಹಲಿಯ ಜನರ ಹಕ್ಕುಗಳಿಗಾಗಿ ಮಾಲಿನ್ಯ ಹಣದುಬ್ಬರ ಮತ್ತು ಭ್ರಷ್ಟಾಚಾರದ ವಿರುದ್ಧ ಈ ಹೋರಾಟ ಮುಂದುವರಿಯುತ್ತದೆಎಂದು ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
70 ಸ್ಥಾನಗಳ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡಿದೆ. ಆಪ್ 22 ಸ್ಥಾನಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ ಖಾತೆಯನ್ನೇ ತೆರೆದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ