Kannada NewsKarnataka NewsLatest
ಹೆಬ್ಬಾಳಕರ್ ಆರೋಗ್ಯದ ಕುರಿತು ನಮಗೇ ಆತಂಕ ಕಾಡುತ್ತಿತ್ತು – ಚನ್ನರಾಜ ಹಟ್ಟಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿತ್ಯವೂ ಕೋಟ್ಯಂತರ ರೂ. ಕಾಮಗಾರಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಸರಣಿ ಮುಂದುವರಿದಿದ್ದು, ಶನಿವಾರ ಕ್ಷೇತ್ರದ ಕೊಂಡಸಕೊಪ್ಪ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಪೂಜೆ ನೆರವೇರಿಸಲಾಯಿತು.
ಲೋಕೋಪಯೋಗಿ ಇಲಾಖೆಯ ವತಿಯಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿಶೇಷ ಪ್ರಯತ್ನದಿಂದ ಕೊಂಡಸಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಸುಸಜ್ಜಿತ ಕೊಠಡಿಗಳ ನಿರ್ಮಾಣದ ಕಾಮಗಾರಿಗಳು ಮಂಜುರಾಗಿವೆ. ಒಟ್ಟೂ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಈ ಕೊಠಡಿಗಳ ಕಾಮಗಾರಿ ನಡೆಯಲಿದೆ.
ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನ ಪತ್ರಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಸೇರಿ ಕಾಮಗಾರಿಗೆ ಅಧಿಕೃತವಾಗಿ ಚಾಲನೆಯನ್ನು ನೀಡಿದರು.
ಕಳೆದ 3 ವರ್ಷದಿಂದ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ಶಕೆ ಆರಂಭವಾಗಿದೆ. ಚುನಾವಣೆಯ ಪೂರ್ವ ಮತ್ತು ಚುನಾವಣೆಯ ನಂತರ ಕ್ಷೇತ್ರದ ಜನರ ಬೇಡಿಕೆಗಳನ್ನು ಮತ್ತು ಜನರಿಗೆ ನೀಡಲಾಗಿದ್ದ ಭರವಸೆಗಳನ್ನು ಚಾಚೂ ತಪ್ಪದೆ ಈಡೇರಿಸಲಾಗುತ್ತಿದೆ. ಇಡೀ ರಾಜ್ಯ ಅಭಿವೃದ್ಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದತ್ತ ನೋಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಾಡಿದ್ದಾರೆ. ಜನರ ಪ್ರೋತ್ಸಾಹ ಮತ್ತು ಸಹಕಾರವೇ ಇದಕ್ಕೆಲ್ಲ ಕಾರಣ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.
ಕ್ಷೇತ್ರದ ಅಭಿವೃದ್ದಿ ಮತ್ತು ಹಲವಾರು ಹೊಸ ಯೋಜನೆಗಳನ್ನು ತರುವ ಕನಸನ್ನು ಲಕ್ಷ್ಮಿ ಹೆಬ್ಬಾಳಕರ್ ಹೊಂದಿದ್ದು, ಜನರು ತಮ್ಮ ಬೆಂಬಲವನ್ನು ಇದೇ ರೀತಿ ಮುಂದುವರಿಸಬೇಕು– ಚನ್ನರಾಜ ಹಟ್ಟಿಹೊಳಿ
ಪ್ರವಾಹ ಮತ್ತು ಕೊರೋನಾ ಅಭಿವೃದ್ಧಿ ಕಾಮಗಾರಿಗೆ ಸ್ವಲ್ಪಮಟ್ಟಿಗೆ ತಡೆಯೊಡ್ಡಿತು. ಆದರೆ ಆ ಸಂದರ್ಭದಲ್ಲಿ ಸಹ ಶಾಸಕರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಕ್ಷೇತ್ರದಲ್ಲೆಲ್ಲ ಸುತ್ತಾಡಿ ಜನರ ನೆರವಿಗೆ ನಿಂತರು. ಎಷ್ಟೋ ದಿನ ಅವರು ನಿದ್ದೆಯನ್ನೂ ಮಾಡುತ್ತಿರಲಿಲ್ಲ. ಅವರ ಆರೋಗ್ಯದ ಕುರಿತು ನಮಗೇ ಆತಂಕ ಕಾಡುತ್ತಿತ್ತು. ದೇವರ ದಯೆ ಮತ್ತು ನಿಮ್ಮೆಲ್ಲರ ಆಶಿರ್ವಾದದಿಂದ ಏನೂ ಸಮಸ್ಯೆಯಾಗಲಿಲ್ಲ ಎಂದು ಅವರು ಹೇಳಿದರು.
ಕ್ಷೇತ್ರದ ಅಭಿವೃದ್ದಿ ಮತ್ತು ಹಲವಾರು ಹೊಸ ಯೋಜನೆಗಳನ್ನು ತರುವ ಕನಸನ್ನು ಲಕ್ಷ್ಮಿ ಹೆಬ್ಬಾಳಕರ್ ಹೊಂದಿದ್ದು, ಜನರು ತಮ್ಮ ಬೆಂಬಲವನ್ನು ಇದೇ ರೀತಿ ಮುಂದುವರಿಸಬೇಕು ಎಂದೂ ಚನ್ನರಾಜ ವಿನಂತಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿ ಸದಸ್ಯರಾದ ಅರ್ಜುನಗೌಡ ಪಾಟೀಲ, ಮಾಜಿ ತಾಲೂಕ ಪಂಚಾಯತ್ ಹಾಗೂ ಮಾಜಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಲಕ್ಷ್ಮಣ ಪಾಟೀಲ, ಪಿರಾಜಿ ಸಾಂಬ್ರೆಕರ, ಜ್ಯೋತಿಬಾ ಕುದ್ರೆಮನಿ, ಪ್ರಕಾಶ ಕರಗುಡ್ಡಿಕರ, ರಾಮಾ ಸಾಂಬ್ರೆಕರ್, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ