Kannada NewsKarnataka NewsPolitics

*ಠಾಣೆಗೆ ಬಂದು ತಲೆ ಕತ್ತರಿಸುತ್ತೇವೆ ಅಂದ್ರೆ ಬಿಡೋಕಾಗುತ್ತಾ? ಗೃಹ ಸಚಿವ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ: ಚನ್ನಗಿರಿಯ ಟಿಪ್ಪು ನಗರದ ನಿವಾಸಿ ಆದಿಲ್ ವಿರುದ್ಧ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದುಕೊಂಡು ಬಂದ ಕೂಡಲೇ ಆತ ಮೃತಪಟ್ಟಿದ್ದ. ಇದನ್ನು ಲಾಕಪ್ ಡೆತ್ ಎಂದು ಆರೋಪಿಸುತ್ತಿರುವುದು ಸರಿಯಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದಮೇಲೆ ಸತ್ಯ ತಿಳಿಯಲಿದೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ. 

ನಿನ್ನೆ ದಾವರಣಗೆರೆಯಲ್ಲಿ ಪ್ರತಿಭಟನಾಕಾರರು ಠಾಣೆಗೆ ನುಗ್ಗಿ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗುಂಪು ಘರ್ಷಣೆ ಎಲ್ಲಾ ಹೇಳಿಕೇಳಿ ಮಾಡೋದಿಲ್ಲ ಎಂದು ತಿಳಿಸಿದರು.

ಪ್ರತಿಭಟನೆ ಹತ್ತಿಕ್ಕಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಠಾಣೆಗೆ ಬಂದು ಧಮ್ಕಿ ಹಾಕಿದವರನ್ನು ಬಿಡೋಕ್ಕಾಗುತ್ತಾ. ಠಾಣೆಗೆ ಬಂದು ತಲೆ ಕತ್ತರಿಸುತ್ತೇವೆ ಅಂದ್ರೇ ಬಿಡೋಕಾಗುತ್ತಾ? ಡಿಜೆ ಹಳ್ಳಿ, ಕೆಜೆ ಹಳ್ಳಿ ಹಳ್ಳಿ ರೀತಿಯಲ್ಲಿ ಮಾಡುತ್ತೇವೆ ಅಂದಿದ್ದಾರೆ. ಅವರ ವಿರುದ್ಧ ಕಾನೂನಿನ ಪ್ರಕಾರ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button