Latest

58 ವಿದ್ಯಾರ್ಥಿನಿಯರು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹೈಕೋರ್ಟ್ ಮಧ್ಯಂತರ ಆದೇಶವನ್ನೂ ಉಲ್ಲಂಘಿಸಿ ಕೆಲ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸುತ್ತಿದ್ದು, ಹಿಜಾಬ್ ವಿವಾದ ರಾಜ್ಯದ ಹಲವೆಡೆ ಮುಂದುವರೆದಿದೆ.

ಇದೀಗ ಶಿವಮೊಗ್ಗ ಜಿಲ್ಲೆಯ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿ ಆಗಮಿಸಿದ್ದ 58 ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ.

Home add -Advt

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿದೆ.

ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸುವಂತಿಲ್ಲ ಎಂದು ಆದೇಶಿಸಲಾಗಿದೆ.

ನಂದಗಡ: ಹಿಜಾಬ್ VS ಕೇಸರಿ ಶಾಲು ಸುಖಾಂತ್ಯ

Related Articles

Back to top button