ಅವರು ಮಾಡಿದ್ದಕ್ಕಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡುತ್ತೇವೆ – ಬಹಿರಂಗ ಸಭೆಯಲ್ಲೇ ರಮೇಶ ಜಾರಕಿಹೊಳಿ ಘೋಷಣೆ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಈ ಬಾರಿ ಕಾಂಗ್ರೆಸ್ ಸೋಲಿಸಲೇಬೇಕು. ಇದಕ್ಕಾಗಿ ಅವರು 3 ಸಾವಿರ ರೂ. ಗಿಫ್ಟ್ ಕೊಟ್ಟರೆ ನಾವು 6 ಸಾವಿರ ರೂ. ಗಿಫ್ಟ್ ಕೊಡುತ್ತೇವೆ. ಅವರು ಖರ್ಚು ಮಾಡಿದ್ದಕ್ಕಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡುತ್ತೇವೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.