
ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಮುಂದೆ ಶರಣಾದ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಚಿಕ್ಕಮಗಳು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಗುಂಡಿ ತೋಡಿ ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಚ್ಚಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆ ನಡೆಸಿದ ಕೊಪ್ಪ ಪೊಲೀಸ್ ರ ತಂಡ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಜ.8ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತರಾಗಿದ್ದರು. 6 ನಕ್ಸಲರನ್ನು ಎನ್ ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 6 ನಕ್ಸಲರಿಗೂ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.