ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು, 6 ಜಿಲ್ಲೆಗಳನ್ನು ಬಿಟ್ಟು ಉಳಿದ 24 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನಿಡಿದೆ. ಜೂನ್ 1ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಇನ್ನೊಂದು ವಾರ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮಳೆ ಕೂಡ ಜೋರಾಗಿರುವುದು ರಾಜ್ಯದ ಜನತೆಯಲ್ಲಿ ಆತಂಕ ಇಮ್ಮಡಿಗೊಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ