ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು, ನೇಕಾರರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ನೇಕಾರರಿಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ನೇತೃತ್ವದ ನಿಯೋಗ ಸರ್ಕಾರಕ್ಕೆ ಮನವಿ ಮಾಡಿದೆ.
ಮುಖ್ಯಮಂತ್ರಿಗ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ನೇಕಾರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನೇಕಾರರಿಗೂ ಆರ್ಥಿಕ ಪ್ಯಾಕೇಜ್ ( ಕೂಲಿ ಕಾರ್ಮಿಕರು, ಪಾವರ್ ಲೋಮ್, ಕೈಮಗ್ಗ ಕಾರ್ಮಿಕರು ಹಾಗೂ ನೇಕಾರಿಕೆ ಉದ್ಯೋಗಕ್ಕೆ ಸಂಬಂಧಪಟ್ಟಂತ ಎಲ್ಲ ಕಾರ್ಮಿಕರ) ಘೋಷಿಸಿಸುವಂತೆ, ಗಮನಕ್ಕೆ ತಂದರು, ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಒಂದು ವಾರದಲ್ಲಿ ಪ್ಯಾಕೇಜ್ ಘೋಷಿಸಲಾಗುವುದು ಎಂದರು.
ಡಿಸಿಎಂ ಗೋವಿಂದ ಕಾರಜೋಳ, ಶಾಸಕರಾದ ಅಭಯ ಪಾಟೀಲ, ಮಹಾದೇವಪ್ಪ ಯಾದವಾಡ, ಸಿದ್ದು ಸವದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೈಕಮಾಂಡ್ ನಿರ್ಧಾಕ್ಕೆ ಬದ್ಧ ಎಂದ ಸಚಿವ ನಿರಾಣಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ