Kannada NewsKarnataka News

ಹಲ್ಲೆ ಪ್ರಕರಣ: ಪೊಲೀಸರ ತನಿಖೆ ಕುರಿತು ನಟಿ ಹರ್ಷಿಕಾ ಪೂಣಚ್ಚ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ: ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಹಲ್ಲೆ ನಡೆದ ಪ್ರಕರಣ ಸಂಬಂಧ ಇಂದು ಅವರು ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. 

ಹೇಳಿಕೆ ದಾಖಲಿಸಿದ ಬಳಿಕ ಹರ್ಷಿಕ ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತ್ತಿಸಿದ್ದೇವೆ.‌ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ಮಾಡಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಅವರಲ್ಲಿ ಪ್ರಮುಖವಾಗಿ ನಮ್ಮ ಮೇಲೆ ಗಲಾಟೆ ಮಾಡಿದ ಮೂವರ ಮುಖವನ್ನು ಪತ್ತೆ ಮಾಡಿದ್ದೇವೆ. ಘಟನೆ ಬಗ್ಗೆ ಪೊಲೀಸರು ನಮ್ಮ ಬಳಿ ಹೇಳಿಕೆ ಪಡೆದಿದ್ದಾರೆ ಎಂದು ತಿಳಿಸಿದರು.‌

ಪೊಲೀಸರ ತನಿಖೆ ಬಗ್ಗೆ ಖುಷಿ ಇದೆ, ಇಷ್ಟು ವೇಗವಾಗಿ ತನಿಖೆ ಮಾಡುತ್ತಾರೆ ಅಂದುಕೊಂಡಿರಲಿಲ್ಲ. ನಮಗೆ ಆದ ರೀತಿ ಬೇರೆ ಯಾರಿಗೂ ಆಗಬಾರದು ಅನ್ನೋ ಉದ್ದೇಶಕ್ಕೆ ದೂರು ಕೊಟ್ಟಿದ್ದೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧನ ಮಾಡುವ ಭರವಸೆ ನೀಡಿದ್ದಾರೆ. ನಾವು ಕೂಡ ತನಿಖೆಗೆ ಎಲ್ಲಾ ರೀತಿಯ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.‌

Home add -Advt

Related Articles

Back to top button