
ಪ್ರಗತಿವಾಹಿನಿ ಸುದ್ದಿ: ಸುಮಾರು 60 ಕ್ಕೂ ಹೆಚ್ಚು ಜನರು ಹೊತ್ತು ಮದುವೆಗೆ ಹೊರಟ್ಟಿದ ಲಾರಿ ಪಲ್ಟಿಯಾಗಿ ಭಾರಿ ದುರಂತ ಸಂಭವಿಸಿದ್ದು, ಈ ಘಟನೆಯಲ್ಲಿ ಇಬ್ಬರ ಸಾವಾಗಿ, 50 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಲಾರಿಯಲ್ಲಿದ್ದ 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಭಾಗ್ಯಮ್ಮ(44) ಮಾರೆಮ್ಮ(45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನ ಬಳ್ಳಾರಿಯ ಟ್ರಾಮಾಕೇರ್ ಸೆಂಟರ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡೊದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ