ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನ್ನು ಯಡಿಯೂರಪ್ಪ ಅಂದು ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 10.45ಕ್ಕೆ ವಿಮಾನದ ಮೂಲಕ ಬೆಂಗಳೂರಿನಿಂದ ಹೊರಟು 12 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಯಡಿಯೂರಪ್ಪ 12.30ಕ್ಕೆ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಿರ್ಮಿಸಲಾಗಿರುವ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನ್ನು ಉದ್ಘಾಟಿಸುವರು.
ನಂತರ ಮಹಾನಗರ ಪಾಲಿಕೆಯಿಂದ ಅಶೋಕ ನಗರದಲ್ಲಿ ನಿರ್ಮಿಸಲಾಗಿರುವ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸುವರು. ನಂತರ ರಾಮತೀರ್ಥ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾದ ಮೌಲಾನಾ ಆಝಾದ್ ಭವನ (ಕಚೇರಿ ಸಂಕೀರ್ಣ) ಉದ್ಘಾಟಿಸುವರು.
ಇದಾದ ನಂತರ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.
ಆ ನಂತರ 2.30ಕ್ಕೆ ಸಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಸವದತ್ತಿ ತಾಲೂಕು ಇಂಚಲಕ್ಕೆ ತೆರಳುವರು. ಅಲ್ಲಿ ಶ್ರೀ ಶಿವಯೋಗೀಶ್ವರ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಯಡಿಯೂರಪ್ಪ ಪಾಲ್ಗೊಳ್ಳುವರು.
ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಲಿದ್ದಾರೆ.
29ಕ್ಕೆ ಬೆಳಗಾವಿಗೆ ಯಡಿಯೂರಪ್ಪ: 2 ಕಾರ್ಯಕ್ರಮದಲ್ಲಿ ಭಾಗಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ