ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಎರಡನೇ ದಿನವಾದ ಇಂದು ಕೂಡ ರಾಜ್ಯದಲ್ಲಿ ಬಂದ್ ವಾತಾವರಣ ನಿರ್ಮಾಣವಾಗುತ್ತಿದೆ. ಪೊಲೀಸರೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದು, ಜನರನ್ನು ಸ್ಥಳದಿಂದ ಕಳುಹಿಸುತ್ತಿದ್ದಾರೆ.
ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಅವಧಿಗೂ ಮುನ್ನ ಫೀಲ್ಡಿಗಿಳಿದ ಪೊಲೀಸರು ಅಂಗಡಿ ಮುಂಗಟ್ಟು, ತರಕಾರಿ ಅಂಗಡಿ, ಮಾರ್ಕೆಟ್ ಗಳನ್ನು ಬಂದ್ ಮಾಡಿಸುತ್ತಿದ್ದು, ಅನಗತ್ಯವಾಗಿ ಓಡಾಡುತ್ತ ಜನರಿಗೆ ಲಾಠಿ ಏಟಿನ ಬಿಸಿ ಮುಟ್ಟಿಸುತ್ತಿದ್ದಾರೆ.
ಅಲ್ಲದೇ ಕರ್ಫ್ಯೂ ನಿಯಮ ಉಲ್ಲಂಘಿಸಿ ರಸ್ತೆಗಳಿಗೆ ಬಂದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 10 ಗಂಟೆಯ ಬಳಿಕ ಬಹುತೇಕ ಅಂಗಡಿಗಳು ಕ್ಲೋಸ್ ಆಗಿದ್ದು, ಬಂದ್ ವಾತಾವರಣ ಕಂಡು ಬರುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಲೈವ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ