
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.
ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ವೀಕೆಂಡ್ ಕರ್ಫ್ಯೂ ಸೋಮವಾರ ಮುಗಿಯುತ್ತಿದ್ದಂತೆಯೇ ವಾರಪೂರ್ತಿ ಕರ್ಫ್ಯೂ ಮುಂದುವರೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ವೀಕೆಂಡ್ ಅಲ್ಲ ವಾರಪೂರ್ತಿ ಕರ್ಫ್ಯೂ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಆದರೆ ಜನರೇ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಸೋಮವಾರದಿಂದ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಇನ್ನಷ್ಟು ಮಿತಿ ಮೀರಿದರೆ ಪರಿಸ್ಥಿತಿ ಸಂಪೂರ್ಣ ಕೈಮೀರಲಿದೆ. ಈ ನಿಟ್ಟಿನಲ್ಲಿ ಕರ್ಫ್ಯೂ ಮುಂದುವರೆಸಲು ಚಿಂತನೆ ನಡೆದಿತ್ತು. ಅದರಲ್ಲೂ ಬೆಂಗಳೂರಿನಲ್ಲಿ ವಾರಪೂರ್ತಿ ಕರ್ಫ್ಯೂ ಜಾರಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಎಲ್ಲವನ್ನೂ ಸರ್ಕಾರವೇ ಮಾಡಲಾಗದು. ಸ್ವತ: ಜನರೇ ಜಾಗೃತರಾಗಿ ಅನಗತ್ಯ ಓಡಾಟವನ್ನು ನಿಲ್ಲಿಸಬೇಕು ಎಂದು ತಿಳಿಸಿದರು.
ಔಷಧ ಅಂಗಡಿ ಸಿಬ್ಬಂದಿಯಿಂದಲೇ ರೆಮ್ ಡಿಸಿವಿರ್ ಅಕ್ರಮ ಮಾರಾಟ; ಬೃಹತ್ ಗ್ಯಾಂಗ್ ಬಂಧಿಸಿದ ಸಿಸಿಬಿ