ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ ಸರ್ಕಾರದ ವಿಶೇಷ ದೆಹಲಿ ಪ್ರತಿನಿಧಿಯಾಗಿ ಆಯ್ಕೆಯಾದ ಶಂಕರಗೌಡ ಪಾಟೀಲ ಅವರು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪ್ರಪ್ರಥಮ ಬಾರಿಗೆ ಬೆಳಗಾವಿಗೆ ಆಗಮಿಸಿದರು.
ವಿಮಾನದ ಮೂಲಕ ದೆಹಲಿಯಿಂದ ಬೆಳಗಾವಿ ನಗರಕ್ಕೆ ಆಗಮಿಸಿದ ಶಂಕರಗೌಡ ಅವರನ್ನು ಅವರ ಅಭಿಮಾನಿ ಬಳಗ ಹಾಗೂ ಬಿಜೆಪಿ ಕಾರ್ಯಕರ್ತರು ಪುಷ್ಪ ಗುಚ್ಛ ಹಾಗೂ ಹಾರ ಹಾಕಿ ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.
ನಂತರ ವಿಮಾನ ನಿಲ್ದಾಣದಿಂದ ನೇರವಾಗಿ ಆಗಮಿಸಿ, ಚನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ನಂತರ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತ್ತು ಶಂಕರಗೌಡ ಪಾಟೀಲ ಅವರ ಅಭಿಮಾನಿ ಬಳಗದ ನೂರಾರು ಬೆಂಬಲಿಗರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ