ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಮೂರನೆ ಬಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ವ್ಹೀಲ್ ಚೇರ್ ನಿಂದ ಎದ್ದ ದೀದಿ ಆರಾಮವಾಗಿ ನಡೆದು ಸಾಗಿದ್ದಾರೆ.
ಟಿಎಂಸಿಗೆ ಕೈಕೊಟ್ಟು ಬಿಜೆಪಿಯಿಂದ ನಂದಿಗ್ರಾಮದಲ್ಲಿ ಸ್ಪರ್ಧಿಸಿದ್ದ ಸುವೇಂದು ಅಧಿಕಾರಿ ಕೊನೇಕ್ಷಣದವರೆಗೂ ತೀವ್ರ ಪೈಪೋಟಿ ನೀಡಿದ್ದರು. ನಂದಿಗ್ರಾಮದ ಕೊನೇ ಹಂತದ ಮತ ಎಣಿಕೆಯಲ್ಲಿ ಮಮತಾ ಬ್ಯಾನರ್ಜಿ 1200 ಮತಗಳ ಅಂತರದಿಂದ ಸುವೇಂದು ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಮಮತಾ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
ಚುನಾವಣೆ ವೇಳೆ ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಮತಾ ಬ್ಯಾನರ್ಜಿ ಚಿಕಿತ್ಸೆ ಬಳಿಕ ವ್ಹೀಲ್ ಚೇರ್ ನಲ್ಲಿಯೇ ಕುಳಿತು ಪ್ರಚಾರ ನಡೆಸಿದ್ದರು. ಇದೀಗ ಗೆಲುವು ಸಾಧಿಸುತ್ತಿದ್ದಂತೆ ಖುಷಿಯಿಂದ ವ್ಹೀಲ್ ಚೇರ್ ನಿಂದ ಓಡಾಡುತ್ತಿದ್ದಾರೆ.
ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 216 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 76 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ