Latest

ಕೊರೊನಾ ಅಟ್ಟಹಾಸ; ಚುನಾವಣಾ ರ್ಯಾಲಿ ರದ್ದುಗೊಳಿಸಿದ ರಾಹುಲ್; ಕುತೂಹಲ ಕೆರಳಿಸಿದ ಪ್ರಧಾನಿ ನಡೆ

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಒಂದೆಡೆ ಚುನಾವಣಾ ಅಖಾಡ ರಂಗೇರಿದ್ದರೆ, ಇನ್ನೊಂದೆಡೆ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ಬಂಗಾಳದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ರ್ಯಾಲಿ, ಸಾರ್ವಜನಿಕ ಸಭೆಗಳನ್ನು ರದ್ದು ಮಾಡಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ನಂತಹ ಪರಿಸ್ಥಿತಿಯಲ್ಲಿ ಬೃಹತ್ ರ್ಯಾಲಿಗಳನ್ನು ಆಯೋಜಿಸುವಾಗ ಉಂತಾಗಬಹುದಾದ ಪರಿಣಾಮಗಳ ಬಗ್ಗೆ ಎಲ್ಲಾ ರಾಜಕೀಯ ನಾಯಕರು ಗಂಭೀರವಾಗಿ ಯೋಚಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.

Related Articles

ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೊದಲ 5 ಹಂತದ ಚುನಾವಣೆ ವೇಳೆ ಬಿಜೆಪಿ, ಟಿಎಂಸಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳೂ ಕೋವಿಡ್ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಪ್ರಚಾರ ನಡೆಸಿವೆ. ಪರಿಣಾಮ ರಾಜ್ಯದಲ್ಲಿ ಕೋವಿಡ್ ಪ್ರಕರಣ ಏಕಾಏಕಿ ಏರಿಕೆಯಾಗುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ಕೂಡ ಪ್ರಚಾರ ಕಾರ್ಯಕ್ರಮದ ಅವಧಿಗೆ ಕತ್ತರಿ ಹಾಕುತ್ತಿದೆ.

ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರತೆ ಅರಿತ ರಾಹುಲ್ ಗಾಂಧಿ ನಿಗದಿಯಾಗಿದ್ದ ತಮ್ಮ ಚುನಾವಣಾ ರ್ಯಾಲಿಗಳನ್ನು ರದ್ದು ಮಾಡಿದ್ದಾರೆ. ಕೊರೊನಾ ಭೀಕರತೆ ಸೃಷ್ಟಿಯಾದರೂ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿರುವ ಪ್ರಧಾನಿ ಮೋದಿ ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ರೇವ್ ಪಾರ್ಟಿ ಆಯೋಜನೆ; ಮಹಿಳಾ ಕಾನ್ಸ್ ಟೇಬಲ್ ಅಮಾನತು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button