ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಬಿರ್ಬೂಮ್ ಹತ್ಯಾಕಾಂಡ ಚರ್ಚೆಯ ವೇಳೆ ವಿಧಾನಸಭೆಯಲ್ಲಿಯೇ ಟಿಎಂಸಿ ಹಾಗೂ ಬಿಜೆಪಿ ಶಾಸಕರು ಪರಸ್ಪರ ಹೊಡೆದಾಡಿಕೊಂಡ ಘಟನೆ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಡೆದಿದೆ.
ಬಿರ್ಭೂಮ್ ನ ರಾಮಪುರಹತ್ ನಲ್ಲಿ 8 ಮಹಿಳೆಯರು ಸೇರಿ 11 ಜನರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಬೇಕು ಎಂದು ಸುವೆಂದು ಅಧಿಕಾರಿ ವಿಧಾನಸಭೆಯಲ್ಲಿ ಪಟ್ಟು ಹಿಡಿದ್ದರು. ಈ ವೇಳೆ ಬಿಜೆಪಿ ಹಾಗೂ ಟಿಎಂಸಿ ಸದಸ್ಯರ ನಡುವೆ ವಾಗ್ವಾದ ಆರಂಭವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಗಲಾಟೆಯಲ್ಲಿ ಬಿಜೆಪಿ ಮುಖ್ಯ ಸಚೇತಕ ಮನೋಜ್ ತಿಗ್ಗಾ ಮೇಲೆ ಹಲ್ಲೆ ನಡೆಸಲಾಗಿದೆ. ಅಲ್ಲದೇ ಟಿಎಂಸಿ ಶಾಸಕ ಅಸೀತ್ ಮಜುಂದಾರ್ ಗೂ ಗಾಯಗಳಾಗಿವೆ. ಪರಸ್ಪರ ನೂಕಾಟ ತಳ್ಳಾಟ ನಡೆಸಿದ್ದಲ್ಲದೇ ಶಾಕರು ಶರ್ಟ್ ಗಳನ್ನು ಎಳೆದು ಹರಿದುಕೊಂಡಿದ್ದಾರೆ. ವಿಧಾನಸಭೆ ರಣರಂಗವಾಗಿ ಮಾರ್ಪಟ್ಟಿದೆ. ಕಲಾಪದಲ್ಲಿ ನಡೆದ ಗಲಾಟೆ ಹಿನ್ನೆಲೆಯಲ್ಲಿ ಐವರು ಶಾಸಕರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
SSLC ಪರೀಕ್ಷೆ ಬರೆಯುತ್ತಲೇ ಸಾವನ್ನಪ್ಪಿದ ವಿದ್ಯಾರ್ಥಿನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ