Latest

ಮತದಾನಕ್ಕೆ ಬಂದ ವ್ಯಕ್ತಿಯನ್ನೇ ಗುಂಡಿಟ್ಟು ಕೊಂದ ದುಷ್ಕರ್ಮಿ

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಹಿಂಸಾಚಾರ ಹೆಚ್ಚುತ್ತಿದೆ. ಮತದಾನ ಮಾಡಲು ಬಂದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿದೆ.

ಸೀತಲ್ ಕುಚಿಯ ಪಥನತುಳಿಯ ಮತಗಟ್ಟೆ 85ರಲ್ಲಿ ಇದೇ ಮೊದಲ ಬಾರಿಗೆ ಮತದಾನ ಮಾಡಲು ಬಂದಿದ್ದ ಆನಂದ್ ಬುರ್ಮನ್ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

Home add -Advt

ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮತಗಟ್ಟೆಗೆ ನುಗ್ಗಿ ಆನಂದ್ ನನ್ನು ಹೊರಗೆಳೆದು ತಂದಿದ್ದಾನೆ. ಬಳಿಕ ಗುಂಡಿಟ್ಟು ಹತ್ಯೆಗೈಯ್ಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಹತ್ಯೆ ಹಿಂದೆ ಬಿಜೆಪಿ ಕೈವಾಡವಿದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಆದರೆ ಹತ್ಯೆಯಾದವನು ನಮ್ಮ ಕಾರ್ಯಕರ್ತನಾಗಿದ್ದು ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಬಿಜೆಪಿ ಹೇಳಿದೆ.
ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

Related Articles

Back to top button