Election NewsKannada NewsKarnataka NewsLatest

*ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣೆ :ಸೆ.29 ರಂದು ಅಧಿಸೂಚನೆ*

ಕರ್ನಾಟಕ ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣೆ-೨೦೨೬: ಸೆ.೨೯ ರಂದು ಅಧಿಸೂಚನೆ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣೆ-೨೦೨೬ ಕುರಿತಂತೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ ೨೯ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣಾಧಿಕಾರಿ ಕೆ ಎಮ್ ಜಾನಕಿ ಅವರು ತಿಳಿಸಿದ್ದಾರೆ.

ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ ೨೯ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ ೬ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ ೭ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ ೯ರಂದು ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ ೨೩ರಂದು ಮತದಾನ ನಡೆಯಲಿದ್ದು, ಬೆಳಿಗ್ಗೆ ೮ರಿಂದ ಸಂಜೆ ೪ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ ೨೭ರಂದು ಮತಗಳ ಎಣಿಕೆ ನಡೆಯಲಿದ್ದು, ಅಕ್ಟೋಬರ್ ೩೧ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಚುನಾವಣಾ ಪ್ರಕ್ರಿಯೆಯನ್ನು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.

ದಿನಾಂಕ :೩೦-೧೨-೨೦೨೫ರ ನಂತರ ಮತದಾರರ ಪಟ್ಟಿಯ ನಿರಂತರ ಪರಿ?ರಣೆಯ ಅವಧಿಯಲ್ಲಿ ಮತದಾರರ ಯಾದಿಯಲ್ಲಿ ಹೆಸರು ನೋಂದಾವಣಿ ಕುರಿತು ನಮೂನೆ-೧೮ರಲ್ಲಿ ಸ್ವೀಕೃತವಾದ ಅರ್ಜಿಗಳ ಪೂರಕ ಪಟ್ಟಿ-೨ ತಯಾರಿ ಪ್ರಕ್ರಿಯೆಯ ಜಾರಿಯಲ್ಲಿದ್ದು ಈ ಅವಧಿಯಲ್ಲಿ ದಿನದ ಇಪ್ಪತ್ತ ನಾಲ್ಕು ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರ ಮತ್ತು ದೂರು ಮೇಲ್ವಿಚಾರಣಾ ಕೋಶವನ್ನು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತೆರೆಯಲಾಗಿದ್ದು, ಚುನಾವಣಾ ನೀತಿ ಸಂಹಿತೆ ಹಾಗೂ ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ೦೮೩೧-೨೪೫೧೨೨೯ ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣಾಧಿಕಾರಿ ಕೆ ಎಮ್ ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button