Kannada NewsLatestNational

*ಹೋಟೆಲ್ ನಲ್ಲಿ ಭೀಕರ ಬೆಂಕಿ: 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್‌ ವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ಬಿರ್ಭುಮ್‌ನಲ್ಲಿರುವ ದೇವಾಲಯ ಪಟ್ಟಣವಾದ ತಾರಾಪೀಠದಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಮುಂಜಾನೆ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಗಾಯಾಳುಗಳನ್ನು ರಕ್ಷಿಸಿ ರಾಂಪುರ್ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅಗ್ನಿಶಾಮಕ ಇಲಾಖೆ ಅಂದಾಜಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button