Belagavi NewsBelgaum NewsKannada NewsKarnataka NewsNationalPolitics

*ವಿನಯ ಗುರೂಜಿ ಭವಿಷ್ಯದ ಬಗ್ಗೆ ಡಿಕೆ ಶಿವಕುಮಾರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮಾತನಾಡಿರುವ ವಿನಯ ಗುರುಜಿ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದರಿಂದ ಕೈ ಪಾಳಯದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಈ ಬಗ್ಗೆ ಸ್ವತಃ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿರುವಾಗ ಈ ಹೇಳಿಕೆ ಬಂದಿದೆ ಎಂದು ಕೇಳಿದಾಗ, ಯಾವ ಪವ‌ರ್ ಇಲ್ಲ, ಶೇರು ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ ಎಂದರು.

ಸಭೆ ಮಾಡದಂತೆ ನಾವು ಯಾರನ್ನೂ ತಡೆದಿಲ್ಲ. ಅದರ ಅವಶ್ಯಕತೆ ನಮಗಿಲ್ಲ. ದೊಡ್ಡವರ ಬಗ್ಗೆ ಮಾತನಾಡುವುದು ಬೇಡ ಎಂದು ತಿಳಿಸಿದರು. ಡಿನ್ನರ್ ಸಭೆ ಬಗ್ಗೆ ಕೇಳಿದಾಗ, ಯಾವ ಡಿನ್ನರ್ ಸಭೆ ಇಲ್ಲ ಎಂದು ಡಿಕೆಶಿ ತಿಳಿಸಿದರು.

Home add -Advt

ಇನ್ನು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. ಅದರ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದು, ಅಲ್ಲಿ ನಾವು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

13ರಂದು ಕರೆಯಲಾಗುವ ಸಿಎಲ್ ಪಿ ಸಭೆ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಡಿಕೆಶಿ, ನಾನು ಹಾಗೂ ಸಿಎಂ ಚರ್ಚೆ ಮಾಡಿಯೇ ಕರೆದಿದ್ದೇವೆ. ಅಂದು ಇಡೀ ದಿನ ಪಕ್ಷಕ್ಕೆ ಮುಡಿಪಾಗಿಡಬೇಕು ಎಂದು ಹೇಳಿ, ಅಂದಿನ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಬೆಳಗ್ಗೆ 11 ಗಂಟೆಗೆ ಭಾರತ ಜೋಡೋ ಭವನದಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ಸಭೆ ಕರೆಯಲಾಗಿದೆ. ಸಂಜೆ 4 ಗಂಟೆಗೆ ಪದಾಧಿಕಾರಿಗಳ ಸಭೆ ಕರೆದಿದ್ದೇವೆ. ಸಂಜೆ 6 ಗಂಟೆಗೆ ಶಾಸಕರು, ಸಚಿವರ ಸಭೆ ಮಾಡಿ ಜವಾಬ್ದಾರಿ ನೀಡಲಾಗುವುದು. 14ರಂದು ನಾನು ಹಾಗೂ ಸಿಎಂ ದೆಹಲಿಗೆ ತೆರಳಲಿದ್ದು, 15ರಂದು ದೆಹಲಿಯಲ್ಲಿ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು.

Related Articles

Back to top button