Sports

*ಕಾಲ್ತುಳಿತದ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ : 18 ವರ್ಷಗಳ ಬಳಿಕ ಕಪ್ ಗೆದ್ದ ಖುಷಿಯಲ್ಲಿ ಆರ್ಸಿಬಿ ಹಾಗೂ ಅಭಿಮಾನಿಗಳಿಗೆ ಶಾಕ್ ಎದುರಾಗಿತ್ತು.‌ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಅಭಿಮಾನಿಗಳ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿನಿಂದ ತೀವ್ರ ದುಃಖಿತನಾಗಿದ್ದೇನೆ. ಬಾಯಿಂದ ಮಾತುಗಳೇ ಹೊರಡುತ್ತಿಲ್ಲ ಎಂದು ಕೊಹ್ಲಿ ಶೋಕಿಸಿದ್ದಾರೆ.

ಇದಲ್ಲದೆ ವಿರಾಟ್ ಕೊಹ್ಲಿ RCB ಆಡಳಿತ ಮಂಡಳಿ ಮಾಡಿರುವ ಪೋಸ್ಟ್ ಅನ್ನು ಶೇರ್ ಮಾಡಿ ದುಃಖ ತೋಡಿಕೊಂಡಿದ್ದಾರೆ. ಸಾವಿರಾರು ಮಂದಿ ಕೊಹ್ಲಿ ಪೋಸ್ಟ್ ಗೆ ಕಮೆಂಟ್ಸ್ ಮಾಡಿದ್ದಾರೆ.

Related Articles

Back to top button