Belagavi NewsBelgaum NewsKannada NewsKarnataka NewsNational
*ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ..? ಇಲ್ಲಿದೆ ವಿವರ*

ಪ್ರಗತಿವಾಹಿನಿ ಸುದ್ದಿ: ಚಿನ್ನದ ಬೆಲೆ ಏರುಗತಿಯಲ್ಲಿದೆ. ಬೆಳ್ಳಿ ಬೆಲೆಯೂ ಹೆಚ್ಚಾಗುತ್ತಿದೆ. ಮೊನ್ನೆ ಒಂದು ಗ್ರಾಮ್ಗೆ 35 ರೂನಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಮತ್ತಷ್ಟು ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡುವದಾದರೆ, ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,040 ರುಪಾಯಿ ಆಗಿದೆ. ಬೆಳ್ಳಿ ಬೆಲೆ 100 ಗ್ರಾಮ್ಗೆ 8,450 ರುಪಾಯಿಯಲ್ಲಿ ಇದೆ.
ಅಮೆರಿಕದಲ್ಲಿ ಬಡ್ಡಿದರ ಕಡಿತಗೊಳಿಸುವ ಖಚಿತ ಸುಳಿವು ಸಿಕ್ಕ ಬೆನ್ನಲ್ಲೇ ಅದರ ಪರಿಣಾಮ ಚಿನಿವಾರ ಪೇಟೆಯಲ್ಲಿ ನಿರೀಕ್ಷಿತ ರೀತಿಯಲ್ಲಿ ಆಗುತ್ತಿದೆ. ಹಾಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ