Belagavi NewsBelgaum News

*ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಬೆಳಗಾವಿ ಸಿಪಿಐ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಬೆನ್ನಲ್ಲೇ ಯುವತಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಿದ್ದ ಬೆಳಗಾವಿ ಮಾರಿಹಾಳ ಠಾಣೆ ಸಿಪಿಐ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

ಕರ್ತವ್ಯ ಲೋಪ ಆರೋದಡದಿ ಮಾರಿಹಾಳ ಠಾಣೆ ಸಿಪಿಐ ಗುರುರಾಜ ಕಲ್ಯಾಣ ಶೆಟ್ಟಿಯನ್ನು ವರ್ಗಾವಣೆ ಮಾಡಿ ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್ ಆದೇಶ ಹೊರಡಿಸಿದ್ದಾರೆ.

Home add -Advt

ಮಾರಿಹಾಳ ಠಾಣೆಗೆ ಸಿಸಿಆರ್ ಬಿ ಇನ್ಸ್ ಪೆಕ್ಟರ್ ಮಂಜುನಾಥ್ ನಾಯಕ್ ಅವರನ್ನು ನಿಯೋಜನೆ ಮಾಡಲಾಗಿದೆ.

ಕಂಡಕ್ಟರ್ ಮಹದೇವ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದ ಬೆನ್ನಲ್ಲೇ ರಾತ್ರೋ ರಾತ್ರಿ ಹಿರಿಯ ಅಧಿಕಾರಿಗಳ ಗಮನಕ್ಕೂ ತರದೇ ಕಂಡಕ್ಟರ್ ಮಹದೇವ್ ವಿರುದ್ಧವೇ ಪೋಕ್ಸೋ ಕೇಸ್ ದಾಖಲಿಸಿ ಸಿಪಿಐ ಗುರುರಾಜ್ ಕೇಸ್ ದಾಖಲಿಸಿದ್ದರು. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Related Articles

Back to top button