Karnataka News

*ಅಚ್ಚರಿಯ ಬೆಳವಣಿಗೆ* *ಸರ್ಕಾರದ ವಿರುದ್ಧ ಮಠಾಧೀಶರ ದೂರು!*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರು ಸಿಡಿದೆದ್ದಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿದ ದುರಂತ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇನ್ನೊಂದೆಡೆ ತನಿಖೆ ಕೂಡ ಚುರುಕುಗೊಂಡಿದೆ.

ಈ ನಡುವೆ ಮಠಾಧೀಶರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ಬಗ್ಗೆ ದೂರು ನೀಡಲು ಮುಂದಾಗಿದ್ದಾರೆ.

ಡಾ.ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಲವು ಮಠಾಧೀಶರು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಇಂದು ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.

ಬಳಿಕ ಆರ್ ಸಿಬಿ ವಿರುದ್ಧ ಇಡಿಗೂ ದೂರು ನೀಡುವ ನಿಟ್ಟಿನಲ್ಲಿ ತೀರ್ಮಾನಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button