Kannada NewsKarnataka NewsLatest

ಸುಳೇಬಾವಿ ಸರಕಾರಿ ಪ್ರೌಢಶಾಲೆ ನೂತನ ಕಟ್ಟಡ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಬೆಳಗಾವಿ ವಿಭಾಗದಿಂದ 2019-20 ನೇ ಸಾಲಿನ ನಬಾರ್ಡ್ ಆರ್.ಐ.ಡಿ.ಎಫ್ 25ನೇ ಯೋಜನೆಯಡಿ ನಿರ್ಮಿಸಲಾದ ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ “ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇತರ ಮೂಲಸೌಲಭ್ಯಗಳ ಜೊತೆಗೆ ಶೈಕ್ಷಣಿಕ ಅಭಿವೃದ್ಧಿಗೂ ಸಾಕಷ್ಟು ಒತ್ತು ನೀಡಲಾಗಿದೆ. ಗ್ರಾಮಿಣ ಭಾಗದ ಅನೇಕ ಶಾಲೆಗಳನ್ನು ಸ್ಮಾರ್ಟ್ ಆಗಿ ಉನ್ನತೀಕರಿಸಿದ್ದು ಹಲವಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಪಟ್ಟಣ, ನಗರಗಳಲ್ಲಿ ಲಭಿಸುವ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ” ಎಂದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, “ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಮಾರ್ಗದರ್ಶನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರಾದ್ಯಂತ ಕೈಗೊಳ್ಳಲಾಗುತ್ತಿದ್ದು ಇನ್ನೂ ಹೆಚ್ಚಿನ ಅಭಿವೃದ್ಧಿಯ ಸಂಕಲ್ಪ ಸಾಕಾರವಾಗಲು ಜನತೆ ಕೂಡ ಕೈಜೋಡಿಸಬೇಕು” ಎಂದರು.

ಈ ಸಮಯದಲ್ಲಿ, ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ ಸುಗಣ್ಣವರ, ಎಸ್ ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಬಂಗೆನ್ನವರ, ಶಂಕರಗೌಡ ಪಾಟೀಲ, ಲಕ್ಷ್ಮೀನಾರಾಯಣ ಕಲ್ಲೂರ, ಶಿವಾಜಿ ಉಂಕ್ರಿಪಾಟೀಲ, ಬಸನಗೌಡ ಉಂಕ್ರಿಪಾಟೀಲ, ದತ್ತಾ ಬಂಡಿಗೇಣಿ, ಫಕೀರ ಕೋಲಕಾರ, ಇಂಗಳೆ, ಮುರಗೇಶ ಹಂಪಿಹೊಳಿ, ವಿಠ್ಠಲ ಮಂಡೋ, ಎಸ್.ವೈ. ರಾಯಕರ್, ಮಹಾಲಕ್ಷ್ಮಿ ದೇವಸ್ಥಾನದ ಟ್ರಸ್ಟ್ ಕಮಿಟಿಯವರು, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Home add -Advt
https://pragati.taskdun.com/twin-fetuses-found-in-one-year-old-babys-brain/
https://pragati.taskdun.com/ramesh-jarakiholi-put-a-noose-around-the-neck-of-the-bjp-high-command/

https://pragati.taskdun.com/xi-jinping-to-power-for-another-term/

Related Articles

Back to top button