*ಬಿಜೆಪಿ ರೆಬೆಲ್ ಗಳ ಗುಪ್ತ ಮೀಟಿಂಗ್ ನಲ್ಲಿ ಚರ್ಚೆಯಾಗಿದ್ದೇನು..?*

ಸೆಪ್ಟೆಂಬರ್ 17ರಂದು ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆಗೆ ಬಿಜೆಪಿ ರೆಬೆಲ್ ಮುಖಂಡರಿಂದ ಮುಹೂರ್ತ ಫಿಕ್ಸ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯಾವನೋ ಒಬ್ಬನ ಹಿರೋ ಮಾಡಲು ಹೋರಾಟ ಅಲ್ಲ ಇದು ಎಂದು ಬಸವನಗೌಡಾ ಯತ್ನಾಳ ನೇರವಾಗಿಯೇ ಬಿ.ವೈ.ವಿಜಯೇಂದ್ರ ವಿರುದ್ಧ ಗರಂ ಆಗಿದ್ದಾರೆ ಎನ್ನಲಾಗಿದೆ.
ಬೆಳಗಾವಿಯ ಹೊರವಲಯದಲ್ಲಿ ಬಿಜೆಪಿ ರೆಬಲ್ ನಾಯಕರು ನಡೆಸಿದ ಸಭೆಯ ಇನ್‌ಸೈಡ್ ಮಾಹಿತಿ ಲಭ್ಯವಾಗಿದ್ದು, ಸಭೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಂಸದರಾದ ಪ್ರತಾಪ್ ಸಿಂಹ್, ಅಣ್ಣಾಸಾಹೇಬ ಜೊಲ್ಲೆ, ಜಿ.ಎಂ.ಸಿದ್ದೇಶ್ವರ ಸೇರಿದಂತೆ 12 ಜನ ನಾಯಕರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುಖ್ಯವಾಗಿ 187 ಕೋಟಿ ರೂ. ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರದ ಕುರಿತು ಪಾದಯಾತ್ರೆ ನಡೆಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ಮನವಿ ಮಾಡಿಕೊಂಡು ಚಾಲನೆ ನೀಡಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಭೆಯಲ್ಲಿ ಚರ್ಚೆ ನಡೆಸಿದರು.
ವಾಲ್ಮೀಕಿ ಹಗರಣದ ಕೇವಲ ನೆಪಮಾತ್ರವಾಗಿದೆ. ಆದರೆ ಗೌಪ್ಯ ಸಭೆ ನಡೆಸಿದದವರೆಲ್ಲೂ ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡವರು. ಈಗ ಅವರ ವಿರುದ್ಧ ತಿರುಗಿ ಬಿದ್ದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ವ್ಯವಸ್ಥಿತವಾಗಿ ಕೆಳಗೆ ಇಳಿಸಿ ಮುಡಾ ಹಗರಣದಲ್ಲಿ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ಡಿ.ಕೆ. ಶಿವಕುಮಾರ ಅವರನ್ನು ಸಿಎಂ ಮಾಡಲು ಹೊರಟ್ಟಿದ್ದಾರೆ ಎನ್ನುವ ಸಂದೇಶ ಬಿಜೆಪಿ ಹೈಕಮಾಂಡ್ ಗೆ ರವಾನಿಸಲು ಬಿಜೆಪಿ ರೆಬಲ್ ಗಳು ಗೌಪ್ಯ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸೆಪ್ಟೆಂಬರ್ 17ರಂದು ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆಗೆ ಬಿಜೆಪಿ ರೆಬೆಲ್ ಮುಖಂಡರಿಂದ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ಹೆಳಲಾಗುತ್ತಿದೆ. ಸತತವಾಗಿ ನಾಲ್ಕು ಗಂಟೆಗಳಿಂದ ಖಾಸಗಿ ರೆಸಾರ್ಟ್‌ನಲ್ಲಿ ಸಭೆ ನಡೆಸಿದ ರೇಬಲ್ ನಾಯಕರು, ಕೇಂದ್ರದ ನಾಯಕರನ್ನು ರಾಜ್ಯಕ್ಕೆ ಕರೆಸಿ ಮಾತುಕತೆ ನಡೆಸಲು ತೀರ್ಮಾನಿಸಿದ್ದಾರೆ. ದೀಪಾವಳಿ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ಆಗಲಿದೆ ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ