ನಟಿ ಅಮೂಲ್ಯ ಪತಿ ಜಗದೀಶ್ ಅವಳಿ ಮಕ್ಕಳಿಗಾಗಿ ಖರೀದಿಸಿದ ಮೊದಲ ಆಟಿಕೆ ಮತ್ತು ಕೊಟ್ಟ ಸಂದೇಶವೇನು?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ ಪತಿ ಜಗದೀಶ್ ಆಸ್ಪತ್ರೆಯ ಸಮೂಪವೇ ಇರುವ ಪುಟ್ ಪಾತ್ ವ್ಯಾಪಾರಿಯೊಬ್ಬರಿಂದ ತಮ್ಮ ಮಕ್ಕಳಿಗಾಗಿ ಬಲೂನ್ ಗಳನ್ನು ಖರೀದಿಸಿದರು.

ಅಷ್ಟೇ ಅಲ್ಲ, ಆ ಅಂಗಡಿಯಲ್ಲಿ ಖರೀದಿಸಿದಾಗಿನ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜನರಿಗೆ ಸಂದೇಶವನ್ನೂ ನೀಡಿದ್ದಾರೆ.

ಅವರು ಹೇಳಿದ್ದೇನು? ಓದಿ –

 

ಇತ್ತೀಚಿಗೆ ನಡೆದ ಘಟನೆಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವೆ.

Got first balloons for our young borns from hard working Mr Ravi an well wisher of us whom we met while going to hospital , Ravi born without legs still earns for his family by selling kids play items on footpath in front of maternity hospital in Jayanagar ,Bangalore .

ಸುಸಜ್ಜಿತ ಶಾಪ್‌ಗೂ ಫುಟ್‌ಫಾತ್‌ನಲ್ಲಿ ಮಾರುವ ಪುಟ್ಟ ಅಂಗಡಿಗೂ ಎಷ್ಟೊಂದು ವ್ಯತ್ಯಾಸವಿದೆ ಎಂದು ಮನಸ್ಸಿಗೆ ಅನ್ನಿಸಿತು. ಕೆಲವೊಮ್ಮೆ ದುಬಾರಿ ಬೆಲೆ ತೆತ್ತು ಕೊಂಡುಕೊಳ್ಳುವ ಶಾಪ್‌ನಲ್ಲಿ ಹೃದಯ ಶ್ರೀಮಂತಿಕೆಯೇ ಬಹಳ ಕಡಿಮೆ ಎಂದೆನಿಸಬಹುದು, ಆದರೆ ಕಡಿಮೆ ಬೆಲೆ ಕೊಟ್ಟು ಸಣ್ಣ ಅಂಗಡಿ ಅಥವಾ ಫುಟ್‌ಫಾತ್‌ನಲ್ಲಿ ಏನನ್ನಾದರೂ ತೆಗೆದುಕೊಂಡರೆ ಅವರಲ್ಲಿ ಹೆಚ್ಚಿನ ಪ್ರೀತಿ ವಿಶ್ವಾಸ ಗಮನಕ್ಕೆ ಬರುತ್ತದೆ.

ಶಿವರಾತ್ರಿಯ ದಿನದಂದು ಜಯನಗರದ ಆಸ್ಪತ್ರೆಯ ಬಲಭಾಗದ ಫುಟ್‌ಫಾತ್‌ನಲ್ಲಿ ಬಲೂನ್‌ ಮತ್ತು ಆಟಿಕೆಗಳನ್ನು ಮಾರುತ್ತಿದ್ದ ಕಾಲುಗಳಿಲ್ಲದ ವ್ಯಕ್ತಿ ರವಿ ಎನ್ನುವವರು ʼಅಮೂಲ್ಯ ಮೇಡಂಗೆ ಅವಳಿ ಮಕ್ಕಳಾಗಿದ್ದು ಕೇಳಿ ತುಂಬಾ ಸಂತೋಷವಾಯ್ತು ಸರ್, ಎಲ್ಲರೂ ಚೆನ್ನಾಗಿದಾರಲ್ವಾ ? ನೀವು ಯಾವಾಗ ಹೊರಗೆ ಬರುತ್ತೀರಾ ಎಂದು ಕಾಯುತ್ತಿದ್ದೆʼ ಎಂದು ಆತ್ಮೀಯವಾಗಿ ಮಾತನಾಡಿಸಿದ್ದನ್ನು ಕೇಳಿ ನನಗೆ ನಿಜಕ್ಕೂ ಆಶ್ಚರ್ಯ ಮತ್ತು ಸಂತೋಷ ಎರಡೂ ಆಯಿತು.

ಶ್ರೀಮಂತರಲ್ಲದಿದ್ದರೂ ಅವರ ಹೃದಯ ಶ್ರೀಮಂತಿಕೆ ಎಷ್ಟು ದೊಡ್ಡದಲ್ವಾ ? ಹೀಗಾಗಿ ಡಿಸ್ಚಾರ್ಜ್‌ ಆಗುವಾಗ ದಿನದಂದು ಕಾಲುಗಳಿಲ್ಲದಿದ್ದರೂ ಸ್ವಾಭಿಮಾನದಿಂದ ನಿತ್ಯ ತನ್ನ ಕೆಲಸ ಮಾಡಿಕೊಂಡು ಶ್ರಮವಹಿಸಿ ತನ್ನ ಜೀವನ ನಡೆಸುತ್ತಿರುವ ಆ ವ್ಯಕ್ತಿಯಿಂದ ಮಕ್ಕಳಿಗಾಗಿ ಮೊದಲ ಆಟಿಕೆಗಳ ರೂಪದಲ್ಲಿ ಎರಡು ಬಲೂನ್‌ ಅನ್ನು ಕೊಂಡೆವು.

ಎಲ್ಲವೂ ಕಮರ್ಷಿಯಲ್ ಮತ್ತು ದುಬಾರಿ ಆಗಿರುವ ಈಗಿನ ಕಾಲದಲ್ಲಿ ಈ ರೀತಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ಹೃದಯವಂತರ ಬಳಿ ನಾವು ವಸ್ತುಗಳನ್ನು ಕೊಂಡುಕೊಳ್ಳುವುದರಲ್ಲಿ ತಪ್ಪೇನಿಲ್ಲ ಅಲ್ವಾ ? ಈ ರೀತಿ ಮಾಡುವುದರಿಂದ ಅವರಿಗೂ ಸಹಾಯವಾಗುತ್ತದೆ. ಅವರು ಇನ್ನಷ್ಟು ಆತ್ಮನಿರ್ಭರವಾಗಿ ಜೀವನ ನಡೆಸಲು ಅನುಕೂಲವಾಗುತ್ತದೆ.

ನಿಮಗೇನಾದರೂ ಈ ರೀತಿ ಬೀದಿ ಬೀದಿಗಳಲ್ಲಿ ವ್ಯಾಪಾರ ಮಾಡುವವರು ಕಂಡರೆ ನೀವೂ ಅವರ ಬಳಿ ವಸ್ತುಗಳನ್ನು ಖರೀದಿಸಿ ಅವರನ್ನು ಪ್ರೋತ್ಸಾಹಿಸಿ.
#athmanirbharbharat

 

https://www.instagram.com/p/CazPyg8Bu4l/?utm_source=ig_web_copy_link

 

ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button