ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಗಾದಿಯಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆಯಿದ್ದು, ದಯವಿಟ್ಟು ಸಹಕರಿಸಬೇಕು ಎಂದು ಸೂಕ್ಷ್ಮವಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಕುತೂಹಲದ ಜತೆಗೆ ಹಲವು ಚರ್ಚೆಗೆ ಕಾರಣವಾಗಿದೆ.
ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸುವ ಲಕ್ಷಣ ಇದೆ. ಈ ಹಂತದಲ್ಲಿ ದಯವಿಟ್ಟು ನನಗೆ ಸಹಕರಿಸಿ, ಯಾವುದೇ ಅಡ್ಡಿಮಾಡಬೇಡಿ. ನೀವು ವಿಪಕ್ಷ ನಾಯಕರಾಗೇ ಮುಂದುವರೆಯಬೇಕು. ನಿಮ್ಮ ನಾಯಕತ್ವದಲ್ಲೇ ನಾವು ಮುಂದುವರೆಯುತ್ತೇವೆ. ನೀವು ಬೆರಳಲ್ಲಿ ತೋರಿಸಿದ್ದನ್ನು ಕೈಹಿಡಿದು ಮಾಡುತ್ತೇನೆ. ನೀವೆ ನಮ್ಮ ನಾಯಕರು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸೂಕ್ಷ್ಮವಾಗಿ ಡಿಕೆಶಿ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಾಯ್ಯ, ಯಾರೇ ಕೆಪಿಸಿಸಿ ಆಧ್ಯಕ್ಷರಾದರೂ ನನ್ನ ಆಕ್ಷೇಪಣೆ ಇಲ್ಲ. ನೀವು ಆಗುವುದಕ್ಕೂ ನನ್ನ ಅಭ್ಯಂತರವಿಲ್ಲ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರದಂತೆ ನಾವೆಲ್ಲರೂ ನಡೆದುಕೊಳ್ಳೋಣ ಎಂದು ನಾಜೂಕಾಗಿ ಉತ್ತರಿಸಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರ: ಸಿದ್ದರಾಮಯ್ಯ ಭೇಟಿಯಾದ ಡಿ.ಕೆ ಶಿವಕುಮಾರ್
ಕಾಂಗ್ರೆಸ್ ನನಗೆ ಎಲ್ಲವನ್ನೂ ಕೊಟ್ಟಿದೆ, ಈಗ ಏನನ್ನೂ ಕೇಳುವ ಪ್ರಶ್ನೆ ಇಲ್ಲ ಎಂದ ಡಿ.ಕೆ. ಶಿವಕುಮಾರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ