Kannada NewsKarnataka NewsLatest

ಸಿಎಂ ಯಡಿಯೂರಪ್ಪ ನಾಳೆ ಎಲ್ಲೆಲ್ಲಿ ಭೇಟಿ ನೀಡಲಿದ್ದಾರೆ? ಇಲ್ಲಿದೆ ಸಮಗ್ರ ವಿವರ; ಜಿಲ್ಲೆಯಲ್ಲಿ 19,035 ಜನರ ರಕ್ಷಣೆ

ಅತಿವೃಷ್ಟಿ: ಜಿಲ್ಲೆಯಲ್ಲಿ 19,035 ಜನರ ರಕ್ಷಣೆ

ಕಾಳಜಿ ಕೇಂದ್ರಗಳಲ್ಲಿ 8795 ಜನರಿಗೆ ಆಶ್ರಯ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಜಲಾವೃತಗೊಂಡಿದ್ದ ನದಿತೀರದ‌ ಗ್ರಾಮಗಳಲ್ಲಿ 19,035 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸದ್ಯಕ್ಕೆ 89 ಪರಿಹಾರ(ಕಾಳಜಿ) ಕೇಂದ್ರಗಳನ್ನು ಆರಂಭಿಸಲಾಗಿದ್ದು, 8795 ಜನರಿಗೆ ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ.
ಅತಿವೃಷ್ಟಿ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿರುತ್ತಾರೆ. 37 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಮಳೆಯ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದು, ಸದ್ಯಕ್ಕೆ ಯಾವುದೇ ರೀತಿಯ ತೊಂದರೆಗಳಿಲ್ಲ. ಎಲ್ಲ ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳು ಪ್ರವಾಹ ಪರಿಸ್ಥಿತಿ ಹಾಗೂ ಮಳೆಯ ಪ್ರಮಾಣದ ಬಗ್ಗೆ ನಿರಂತರ ನಿಗಾ ವಹಿಸಿರುತ್ತಾರೆ. ಜನರು‌ ಆತಂಕಪಡುವ ಅಗತ್ಯವಿಲ್ಲ; ಒಂದು ವೇಳೆ ಏನಾದರೂ ತೊಂದರೆಗಳು‌ ಕಂಡುಬಂದರೆ ಸ್ಥಳೀಯ ಅಧಿಕಾರಿಗಳಿಗೆ ತಕ್ಷಣವೇ ಮಾಹಿತಿಯನ್ನು ನೀಡಬೇಕು.
ನದಿಯ‌ ಹರಿವು ಹೆಚ್ಚಾಗಿರುವುದರಿಂದ ನದಿತೀರದ ಗ್ರಾಮಸ್ಥರು ಹಾಗೂ ರೈತರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಸಮಗ್ರ ಪ್ರವಾಸ ವಿವರ

ಸಿಎಂ ಯಡಿಯೂರಪ್ಪ ಬೆಳಗಾವಿ ಪ್ರವಾಸ ಪಟ್ಟಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button