Latest

*ವೈಟ್ ಫೀಲ್ಡ್-ಕೆ.ಆರ್.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಿ, ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್-ಕೆ.ಆರ್.ಪುರಂ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ಬಳಿಕ ಪ್ರಧಾನಿ ಮೆಟ್ರೋದಲ್ಲಿಯೇ ಪ್ರಯಾಣ ಬೆಳೆಸಿದ್ದು ವಿಶೇಷವಾಗಿತ್ತು.

ಸುಮಾರು 4,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವೈಟ್ ಫೀಲ್ಡ್-ಕೆ.ಆರ್.ಪುರಂ ನಡುವಿನನೂತನ ನೇರಳೆ ಮೆಟ್ರೋ ಮಾರ್ಗ ಇದಾಗಿದ್ದು, 13.71 ಕೀಲೋಮೀಟರ್ ಇದೆ. ಈ ಮಾರ್ಗ 12 ಮೆಟ್ರೋ ನಿಲ್ದಾಣಗಳನ್ನು ಹೊಂದಿದೆ.

ವೈಟ್ ಫೀಲ್ಡ್ ನಲ್ಲಿ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಬಳಿಕ ಮೆಟ್ರೋದಲ್ಲಿ ಶಾಲಾ ಮಕ್ಕಳು, ಮೆಟ್ರೋ ಸಿಬ್ಬಂದಿಗಳ ಜೊತೆ 4 ಕಿ.ಮೀ ವರೆಗೆ ಪ್ರಯಾಣ ಬೆಳೆಸಿದರು. ಈ ವೇಳೆ ಮೆಟ್ರೋ ಸಿಬ್ಬಂದಿಗಳು, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ಪ್ರಧಾನಿ ಮೋದಿಯವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಾಥ್ ನೀಡಿದರು.

https://pragati.taskdun.com/karnaataka-vidhanasabha-electioncongress-candidate1st-list/


https://pragati.taskdun.com/karnaataka-vidhanasabha-electioncongress-candidate1st-list/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button