Latest

ವೈಟ್ ಫಂಗಸ್ ಎಂಬ ಮತ್ತೊಂದು ಅಪಾಯಕಾರಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಕೊರೊನಾ ಅಟ್ಟಹಾಸಕ್ಕೆ ನಲುಗಿರುವ ಭಾರತದಲ್ಲಿ ಈಗಾಗಲೇ ಬ್ಲ್ಯಾಕ್ ಫಂಗಸ್ ಎಂಬ ಶಿಲೀಂದ್ರ ಸೋಂಕು ಹಲವರನ್ನು ಬಲಿ ಪಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ಮತ್ತೊಂದು ಮಹಾಮಾರಿ ಪತ್ತೆಯಾಗಿದ್ದು, ವೈಟ್ ಫಂಗಸ್ ಎಂಬ ಶಿಲೀಂದ್ರ ಸೋಂಕು ಕಾಣಿಸಿಕೊಂಡಿದೆ.

ಬಿಹಾರದ ಪಾಟ್ನಾದಲ್ಲಿ ನಾಲ್ವರು ಸೋಂಕಿತರಲ್ಲಿ ವೈಟ್ ಫಂಗಸ್ ಪತ್ತೆಯಾಗಿದೆ. ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರಲ್ಲಿ ಹೆಚ್ ಆರ್ ಸಿಟಿ ಸ್ಕ್ಯಾನ್ ವೇಳೆ ಈ ಹೊಸ ಶಿಲೀಂದ್ರ ಸೋಂಕು ಪತ್ತೆಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ವೈಟ್ ಫಂಗಸ್ ಬ್ಲ್ಯಾಕ್ ಫಂಗಸ್ ಗಿಂತಲೂ ಹೆಚ್ಚು ಅಪಾಯಕಾರಿಯಾಗಿದ್ದು, ಇದು ಶ್ವಾಸಕೋಶದ ಜೊತೆಗೆ ಉಗುರು, ಚರ್ಮ, ಹೊಟ್ಟೆ, ಮೂತ್ರಪಿಂಡ, ಮೆದುಳು, ಖಾಸಗಿ ಭಾಗಗಳು ಮತ್ತು ಬಾಯಿ ಹಾಗೂ ದೇಹದ ಇತರ ಭಾಗಗಳ ಮೇಲೆ ಪರಿಣಾಮಗಳನ್ನು ಬೀರುತ್ತದೆ ಎಂದು ತಿಳಿದುಬಂದಿದೆ.

ಮತ್ತೊಂದು ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button