Latest

ರಾಜ್ಯದಲ್ಲೂ ಪತ್ತೆಯಾಯ್ತು ವೈಟ್ ಫಂಗಸ್

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಕೊರೊನಾ ಸೋಂಕಿನ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಹಾಗೂ ವೈಟ್ ಫಂಗಸ್ ಗಳ ಅಟ್ಟಹಾಸ ಹೆಚ್ಚುತ್ತಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 6 ಜನರಲ್ಲಿ ವೈಟ್ ಫಂಗಸ್ ಪತ್ತೆಯಾಗಿದೆ.

ರಾಯಚೂರು ಜಿಲ್ಲೆ ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ವೈಟ್ ಫಂಗಸ್ ಪತ್ತೆಯಾಗಿದ್ದು, ಇವರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರಾಗಿದ್ದಾರೆ. ಕಳೆದ 15 ದಿನಗಳಲ್ಲಿ ಆಸ್ಪತ್ರೆಯಲ್ಲಿ 6 ಜನರಲ್ಲಿ ಈ ಶಿಲೀಂದ್ರ ಸೋಂಕು ಪತ್ತೆಯಾಗಿದೆ ಎಂದು ಖಾಸಗಿ ಆಸ್ಪತ್ರೆ ವೈದ್ಯ ಡಾ.ಮಂಜುನಾಥ್ ಹೇಳಿದ್ದಾರೆ.

ವೈಟ್ ಫಂಗಸ್ ಸೋಂಕಿತರು ಭಯಪಡಬೇಕಿಲ್ಲ. 14 ದಿನಗಳ ಕಾಲ ಔಷಧಿ ನೀಡಿದರೆ 7 ದಿನಗಳಲ್ಲೇ ಗುಣಮುಖರಾಗುತ್ತಾರೆ. ಫಂಗಸ್ ರಕ್ತಕ್ಕೆ ಸೇರಿದರೆ ಮಾತ್ರ ಪ್ರಾಣಾಪಾಯ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಪೊಲೀಸರಿಗೆ ಗೃಹ ಸಚಿವ ಬೊಮ್ಮಾಯಿ ಕಟ್ಟಪ್ಪಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button