Latest

*ಬೆಳಗಾವಿ: ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ; ಜನ ಜೀವನ ಅಸ್ತವ್ಯಸ್ಥ*

ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕಳೆದ ಒಂದು ಗಂಟೆಯಿಂದ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಬೆಳಗಾವಿ ನಗರದ ಹಲವು ರಸ್ತೆಗಳು ಜಲಾವೃತಗೊಂಡಿವೆ. ವಾಹನ ಸವಾರರು ಪರದಾಟ ನಡೆಸಿದ್ದಾರೆ. ತಗ್ಗು ಪ್ರದೇಶಗಳಿಗೆ, ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಸದಾಶಿವ ನಗರ ಸೇರಿದಂತೆ ಕೆಲವೆಡೆ ಮರಗಳು ನೆಲಕ್ಕುರುಳಿವೆ. ಸವದತ್ತಿಯಲ್ಲಿ ಸಹ ಮಳೆಯಿಂದ ಭಾರಿ ಅನಾಹುತವಾಗಿದೆ.

ಇನ್ನು ಹುಬ್ಬಳ್ಳಿ, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ ಜೋರಾಗಿದ್ದು, ಪ್ರಮುಖ ರಸ್ತೆಗಳು ನದಿಯಂತೆ ಉಕ್ಕಿ ಹರಿಯುತ್ತಿವೆ. ಬಿರುಗಾಳಿಯಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

Home add -Advt

Related Articles

Back to top button