Latest

ರಾಜ್ಯ ಸಚಿವ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :

ರಾಜ್ಯಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ ಆಗಿದೆ.

ಬುಧವಾರ (ಜೂ.12) ಬೆಳಗ್ಗೆ 11.30ಕ್ಕೆ ನೂತನ ಸಚಿವರಿಗೆ ಪ್ರಮಾಣ ವಚನ ಬೋಧನೆಗೆ ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿ ಅನುಮತಿ ಕೇಳಿದ್ದಾರೆ.

ಮೂವರು ಶಾಸಕರಿಗೆ ರಾಜಭವನದಲ್ಲಿ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಲಿದ್ದಾರೆ.  ರಾಮಲಿಂಗಾ ರೆಡ್ಡಿ,  ವಿ.ಮುನಿಯಪ್ಪ ಮತ್ತು  ಅಮರೇಗೌಡ ಬಯ್ಯಾಪುರ ಅವರು ಸಚಿವರಾಗುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ಸುಧಾಕರ ಹೆಸರೂ ಇದೆ. ಅತೃಪ್ತರಲ್ಲಿ ಯಾರಿಗೆ ಮಣೆ ಹಾಕಲಾಗುವುದು ಕಾದು ನೋಡಬೇಕಿದೆ. ರಮೇಶ ಜಾರಕಿಹೊಳಿ ಸಂಪುಟ ಸೇರುವ ಸಾಧ್ಯತೆ ಕ್ಷೀಣಿಸಿದೆ. ಇಬ್ಬರು ಪಕ್ಷತರರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯೂ ಇಲ್ಲದಿಲ್ಲ.

Home add -Advt

ಒಟ್ಟಾರೆ ಅಸಮಾಧಾನಿತರನ್ನು ಸಮಾಧಾನಪಡಿಸಲು ಸಂಪುಟ ವಿಸ್ತರಣೆ ನಡೆಯುತ್ತಿದ್ದು, ಇದು ಇನ್ನಷ್ಟು ಅಸಮಾಧಾನ ಹುಟ್ಟುಹಾಕಲಿದೆಯೇ ಕಾದು ನೋಡಬೇಕಿದೆ.

Related Articles

Back to top button