ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನ ಬದಲಾಯಿಸುವ ಮಾತು ಕೇಳಿ ಬರುತ್ತಿದೆ.
ಹಾಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೆಳಗಿಳಿಸಿ ಸಮರ್ಥರೊಬ್ಬರನ್ನು ಆಸ್ಥಾನದಲ್ಲಿ ಕೂಡ್ರಿಸಲು ಪಕ್ಷ ಚಿಂತಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಬಲ ನಾಯಕರಾಗಿರುವ ಡಿ.ಕೆ.ಶಿವಕುಮಾರ ಮತ್ತು ಎಂ.ಬಿ.ಪಾಟೀಲ ಹೆಸರು ಕೇಳಿ ಬರುತ್ತಿದೆ.
ಜಾತಿ ಲೆಕ್ಕಾಚಾರ ಮತ್ತು ಸಾಮರ್ಥ್ಯ ಎರಡನ್ನೂ ಪರಿಗಣಿಸಿ ಈ ಇಬ್ಬರೊಳಗೆ ಒಬ್ಬರನ್ನು ಅಧ್ಯಕ್ಷರಾಗಿಸಬೇಕೆಂದು ಚಿಂತನೆ ನಡೆದಿದೆ.
ಆದರೆ ಪಕ್ಷದ ಇಂದಿನ ಪರಿಸ್ಥಿತಿಯಲ್ಲಿ ಇವರಿಬ್ಬರೂ ಮಂತ್ರಿ ಸ್ಥಾನ ಬಿಟ್ಟು ಅಧ್ಯಕ್ಷರಾಗಲು ಒಪ್ಪುತ್ತಾರೆಯೇ ಎನ್ನುವ ಪ್ರಶ್ನೆಯೂ ಇದೆ.
ಇದೇ ವೇಳೆ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಹುದ್ದೆಯೂ ಮಹತ್ವದ್ದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ