Latest

ಉದ್ಯೋಗ ಸೃಷ್ಟಿ, ಮೂಲಭೂತ ಸೌಕರ್ಯ ಅಭಿವೃದ್ಧಿಯಲ್ಲಿ ಸವಾಲು -ಕರಿಸಿದ್ದಪ್ಪ

 

 

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ಇಲ್ಲಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ 70ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕುಲಪತಿ ಡಾ. ಕರಿಸಿದ್ದಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಾವು 21ನೇ ಶತಮಾನದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಿದ್ದೇವೆ. ಆದರೆ ಉದ್ಯೋಗ ಸೃಷ್ಟಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮುಂತಾದ ಕ್ಷೇತ್ರಗಳಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಈ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ನಮ್ಮ ಯುವಜನಾಂಗವನ್ನು ಸನ್ನದ್ದಗೊಳಿಸುವ ಜವಾಬ್ದಾರಿ ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದು ಅಭಿಪ್ರಾಯಪಟ್ಟರು
ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳಾದ ಎಂ. ಎ. ಸಪ್ನಾ, ಸ್ಥಾನಿಕ ಅಭಿಯಂತರರಾದ  ಹೆಚ್. ಜಿ. ಹೇಮಂತಕುಮಾರ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

Back to top button