ಪ್ರಗತಿವಾಹಿನಿ ಸುದ್ದಿ; ಜಿನೇವಾ: ರೂಪಾಂತರಿ ವೈರಸ್ ಒಮಿಕ್ರಾನ್ ವಿಶ್ವದಾದ್ಯಂತ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ಸೌಮ್ಯ ಸ್ವರೂಪದ್ದೆಂದು ನಿರ್ಲಕ್ಷ ಮಾಡುವಂತಿಲ್ಲ. ಒಮಿಕ್ರಾನ್ ಕೂಡ ಪ್ರಾಣಾಂತಿಕವಾದದ್ದು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಒಮಿಕ್ರಾನ್ ವೇಗವಾಗಿ ಹರಡುತ್ತದೆ ಆದರೆ ಅಪಾಯಕಾರಿ ಅಲ್ಲ. ಡೆಲ್ಟಾ ತಳಿಯಷ್ಟು ಮಾರಣಾಂತಿಕವಲ್ಲ ಎಂದು ಹಲವು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದರು. ಆದರೆ ಇದೀಗ ವಿಸ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಆತಂಕಕ್ಕೆ ಕಾರಣವಾಗಿದೆ.
ದಾಖಲೆ ಪ್ರಮಾಣದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಡೆಲ್ಟಾ ಅಪಾಯವನ್ನು ಮೀರಿಸುವಂತೆ ಅಟ್ಟಹಾಸ ಮೆರೆಯುತ್ತಿದೆ. ಹಿಂದಿನ ಪ್ರಭೇದಗಳಂತೆಯೇ ಒಮಿಕ್ರಾನ್ ಕೂಡ ಜನರು ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿದೆ. ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇದು ಜಗತ್ತಿನಾದ್ಯಂತ ಆರೋಗ್ಯ ವ್ಯವಸ್ಥೆ ಮೇಲೆ ಒತ್ತಡ ಬೀರುವಂತೆ ಮಾಡುತ್ತಿದೆ. ಒಮಿಕ್ರಾನ್ ನನ್ನು ಲಘುವಾಗಿ ಪರಿಗಣಿಸಬೇಡಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಡಾ.ಟೆಡ್ರೂಸ್ ಅಧಾನೊಮ್ ಗೆಬ್ರೆಯೆಸಸ್ ತಿಳಿಸಿದ್ದಾರೆ.
ವ್ಯಾಕ್ಸಿನ್ ಪಡೆಯದವರಲ್ಲಿ ಒಮಿಕ್ರಾನ್ ಸೋಂಕಿನ ಗಂಭೀರತೆ ಕಡಿಮೆ. ಅವರಿಗೆ ಲಕ್ಷಣಗಳು ಗಂಭೀರವಾಗಿ ಗೋಚರಿಸುತ್ತಿಲ್ಲ. ಆದರೆ ವೇಗವಾಗಿ ಹರಡುತ್ತಿರುವುದರಿಂದ ಅಪಾಯಕಾರಿಯಾಗಿದೆ ಎಂಬುದನ್ನು ತಿಳಿದಿರಬೇಕು ಎಂದು ಎಚ್ಚರಿಸಿದ್ದಾರೆ.
5 ಜಿಲ್ಲೆಗಳಲ್ಲಿ ಒಮಿಕ್ರಾನ್ ಅಟ್ಟಹಾಸ; ವ್ಯಾಕ್ಸಿನ್ ಪಡೆಯದಿದ್ದರೆ ಜೀವಕ್ಕೆ ತೊಂದರೆ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ