ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ?: ಸಚಿವ ಸುಧಾಕರ
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಚುನಾವಣೆ ಮುಂಚೆ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಗ್ಗೆ ಬಿಜೆಪಿ ಜೆಡಿಎಸ್ ನಾಯಕರಿಗೆ ಗೊತಿತ್ತು. ಆದರೂ ಮೈತ್ರಿ ಅಭ್ಯರ್ಥಿಯನ್ನಾಗಿ ಅವರನ್ನೆ ಮಾಡಿದ್ದು ಯಾಕೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಇಡೀ ದೇಶವೇ ತಲೆ ತಗ್ಗಿಸುವಂಥ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ? ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ, ಹಿರಿಯ ಮುಖಂಡ ಎ.ಟಿ.ರಾಮಸ್ವಾಮಿ, ದೇವರಾಜೇ ಗೌಡ ಎಂಬುವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮೈಸೂರು ಪ್ರವಾಸದಲ್ಲಿದ್ದ ಅಮಿತ್ ಶಾ ಅವರ ಗಮನಕ್ಕೆ ಆಗಲೇ ತಂದಿದ್ದರು. ಆದರು ಅವರಿಗೆ ಟಿಕೆಟ್ ಏಕೆ ನೀಡಿದರು ಎಂದು ಆಕ್ರೋಶ ಹೊರ ಹಾಕಿದರು.
ಇಂಥ ವಿಷಯ ಗೊತ್ತಿದ್ದರೂ ಮೈತ್ರಿ ನಾಯಕರು ಪ್ರಜ್ವಲ್ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿದ್ದು ಎಷ್ಟು ಸರಿ. ಇದಕ್ಕೆ ಬಿಜೆಪಿ ನಾಯಕರು ಉತ್ತರಿಸುವರೇ?. ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಬಿಜೆಪಿ ನಾಯಕರಿಗೆ ಮೊದಲೇ ಅರಿವಿತ್ತು ಎಂದೂ ಅವರು ಅರೋಪಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ