Latest

ಶಿವಲಿಂಗಕ್ಕೆ ಅರ್ಧಪ್ರದಕ್ಷಿಣೆಯನ್ನು ಏಕೆ ಹಾಕುತ್ತಾರೆ ?

ಬಹುತೇಕ ಶಿವಾಲಯಗಳಲ್ಲಿ ಭಕ್ತರು ಅರ್ಧ ಪ್ರದಕ್ಷಿಣೆ ಹಾಕುವುದನ್ನು ಕಾಣುತ್ತೇವೆ. ಕೆಲವರಿಗೆ ಇದು ಎಂಥ ಆಚರಣೆ ಎಂದು ಎನಿಸುವುದುಂಟು. ಆದರೆ ಹಾಗೆ ಅರ್ಧ ಪ್ರದಕ್ಷಿಣೆ ಹಾಕುವುದರ ಹಿಂದೆ ಸಕಾರಣವಿದೆ. ಏನದು? ಇಲ್ಲಿದೆ ನೋಡಿ ವಿಶೇಷ ಮಾಹಿತಿ
ಶಿವನಿಗೆ ಹಾಕುವ ಪ್ರದಕ್ಷಿಣೆಯು ಅರ್ಧಚಂದ್ರನಂತೆ, ಅಂದರೆ ಸೋಮಸೂತ್ರಿಯಾಗಿರುತ್ತದೆ. ಪಾಣಿಪೀಠದಿಂದ ಪ್ರಾಂಗಣದವರೆಗೆ ಹೋಗುವ ಹರಿನಾಳಕ್ಕೆ ಸೋಮಸೂತ್ರವೆನ್ನುತ್ತಾರೆ. ಶಿವಲಿಂಗದ ಎದುರು ನಿಂತಾಗ ಬಲಬದಿಗೆ ಅಭಿಷೇಕದ ನೀರು ಹೋಗುವ ಹರಿನಾಳವಿರುತ್ತದೆ. ಪ್ರದಕ್ಷಿಣೆಯ ಮಾರ್ಗವು ಅಲ್ಲಿಂದ ಆರಂಭವಾಗುತ್ತದೆ. ಪ್ರದಕ್ಷಿಣೆ ಹಾಕುವಾಗ ಹರಿನಾಳದಿಂದ ಆರಂಭಿಸಿ ತಮ್ಮ ಎಡಬದಿಯಿಂದ ಹರಿನಾಳದ ಇನ್ನೊಂದು ಬದಿಯವರೆಗೆ ಹೋಗಬೇಕು. ನಂತರ ಹರಿನಾಳವನ್ನು ದಾಟದೇ ಹಿಂತಿರುಗಿ ಪುನಃ ಹರಿನಾಳದ ಮೊದಲ ಬದಿಯವರೆಗೆ ಬಂದು ಪ್ರದಕ್ಷಿಣೆ ಪೂರ್ಣಗೊಳಿಸಬೇಕು.

 ಈ ನಿಯಮ ಶಿವಲಿಂಗವು ಮಾನವಸ್ಥಾಪಿತ ಅಥವಾ ಮಾನವನಿರ್ಮಿತವಾಗಿದ್ದರೆ ಮಾತ್ರ ಅನ್ವಯಿಸುತ್ತದೆ. ಈ ನಿಯಮವು ಸ್ವಯಂಭೂ ಲಿಂಗಕ್ಕೆ ಮತ್ತು ಮನೆಯಲ್ಲಿರುವ ಲಿಂಗಕ್ಕೆ ಅನ್ವಯಿಸುವುದಿಲ್ಲ.

ಪಾಣಿಪೀಠದಿಂದ ಹರಿದು ಹೋಗುವ ನೀರಿನಲ್ಲಿ ಶಕ್ತಿಯ ಪ್ರವಾಹವಿರುವುದರಿಂದ ಅದನ್ನು ದಾಟಬಾರದು. ಅದನ್ನು ದಾಟುವಾಗ ಕಾಲುಗಳು ಅಗಲವಾಗುವುದರಿಂದ ವೀರ್ಯನಿರ್ಮಿತಿಯ ಮೇಲೆ ಹಾಗೂ 5 ವಾಯುಗಳ ಮೇಲೆ ವಿಪರೀತ ಪರಿಣಾಮವಾಗುತ್ತದೆ. ದೇವದತ್ತ ಮತ್ತು ಧನಂಜಯ ವಾಯುಗಳು ಕುಗ್ಗುತ್ತವೆ. ಆದರೆ ಅದನ್ನು ದಾಟುವಾಗ ವ್ಯಕ್ತಿಯು ತನ್ನನ್ನು ತಾನು ಬಿಗಿಹಿಡಿದುಕೊಂಡರೆ ನರಗಳು ಬಿಗಿಯಾಗಿ ಅದರ ಪರಿಣಾಮವಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಓದಿ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಶಿವ’

ಸಂಗ್ರಹ :
ಶ್ರೀ. ವಿನೋದ್ ಕಾಮತ್,
ವಕ್ತಾರರು, ಸನಾತನ ಸಂಸ್ಥೆ
(ಸಂಪರ್ಕ : 9342599299)

 

ಮುಜರಾಯಿ ಇಲಾಖೆಗೆ ದಾಖಲೆಯ ಅನುದಾನ: ಶಶಿಕಲಾ ಜೊಲ್ಲೆ ಹರ್ಷ

https://pragati.taskdun.com/record-grant-to-mujarai-department-shasikala-jolle/

*ಕಾಡ್ಗಿಚ್ಚು ನಂದಿಸಲು ಹೋಗಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು*

https://pragati.taskdun.com/hasanasakaleshapurawildfireforest-guard-death/

ಶಿವಲಿಂಗ ಮತ್ತು ಅದರ ವಿಧಗಳು

https://pragati.taskdun.com/shivlinga-and-its-types-special-article-for-shivratri/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button