Latest

ಸತೀಶ್ ಜಾರಕಿಹೊಳಿ ಗೋವಾಕ್ಕೆ ಧಾವಿಸಿದ್ದೇಕೆ?

ಕೈ ಕಮಾಂಡ್ ಸೂಚನೆ; ಗೋವಾದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾರ್ಚ್ 10ರಂದು ಪಂಚ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದ್ದು, ಕಾಂಗ್ರೆಸ್ ಹೈ ಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಈಗಾಗಲೇ ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ಹೈ ಕಮಾಂಡ್ ಅಲರ್ಟ್‌ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೂ ಗೋವಾಗೆ ಹೋಗಲು ಸೂಚನೆ ನೀಡಿದೆ.
ಗೋವಾ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಬರುವವರೆಗೆ ಅಲ್ಲೇ ಇರಬೇಕು. ಫಲಿತಾಂಶ ಅತಂತ್ರವಾಗಿ ಅದರ ಲಾಭ ಪಡೆಯುವ ಅವಕಾಶವಿದ್ದರೆ ಅದನ್ನು ಬಳಸಿಕೊಂಡು ಪಕ್ಷ ಅಧಿಕಾರಕ್ಕೆ ತರಲು ಬೇಕಾದ ಪ್ರಯತ್ನ ಮಾಡಬೇಕು ಎಂದು ಹೈ ಕಮಾಂಡ್ ತಿಳಿಸಿದೆ.
 ಇಂದು ಬೆಂಗಳೂರಿನಿಂದ ನೇರ ಗೋವಾಗೆ ತೆರಳಿದ ಸತೀಶ್‌ ಜಾರಕಿಹೊಳಿ ಅವರು 2017ರಲ್ಲಿ ಆದ ಘಟನೆ ಮರುಕಳಿಸದಂತೆ ಎಚ್ಚರ ವಹಿಸುತ್ತಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಗೇವಾದ 40 ಸ್ಥಾನಗಳಲ್ಲಿ ಕಾಂಗ್ರೆಸ್ 17, ಬಿಜೆಪಿ 13 ಸ್ಥಾನಗಳಿಸಿದ್ದವು. ಆದರೆ ಆಪರೇಶನ್ ಕಮಲದ ಮೂಲಕ ಬಿಜೆಪಿ ಅಧಿಕಾರ ಕಬಳಿಸಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button