Belagavi NewsBelgaum NewsKannada NewsKarnataka News

*ಮುಂದಿನ ಐದು ದಿನ ರಾಜ್ಯದಲ್ಲಿ ಬೀಳಲಿದೆ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ 5 ದಿನ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದ್ದು ‘ಎಲ್ಲೋ ಅಲರ್ಟ್’ ನೀಡಲಾಗಿದೆ.

ಹಗಲಿನ ವೇಳೆಯಲ್ಲಿ ಪಶ್ಚಿಮ ದಿಕ್ಕಿನಿಂದ ಗಂಟೆಗೆ ಸುಮಾರು 13 ಮೈಲಿ ವೇಗದಲ್ಲಿ ತಂಗಾಳಿ ಬೀಸುತ್ತಿದ್ದು ಗಾಳಿಯಲ್ಲಿನ ಆರ್ದ್ರತೆ ಶೇಕಡಾ 67 ರಷ್ಟಿರಲಿದೆ.

ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಜೂನ್ 28 ಮತ್ತು 29 ರಂದು ಶೇಕಡಾ 65 ರಷ್ಟು ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. 

ಮುಂಬರುವ ದಿನಗಳಲ್ಲಿ ತಾಪಮಾನವು 26 ರಿಂದ 29 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯಲಿದ್ದು, ಆದ್ರ್ರತೆ ಶೇಕಡಾ 80 ಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಜುಲೈ ಮೊದಲ ವಾರದವರೆಗೂ ಮಳೆಯ ಆರ್ಭಟ ಮುಂದುವರಿಯಲಿದ್ದು ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಹವಾಮಾನ ಕೇಂದ್ರ ಸೂಚಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button