Belagavi NewsBelgaum NewsKannada NewsKarnataka News

*ನಾಳೆ ನಾಡಿದ್ದು ವ್ಯಾಪಕ ಮಳೆ: ಹಲವು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಕೊಡಗು, ಹಾಸನ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಚಿತ್ರದುರ್ಗ, ವಿಜಯನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಜೂನ್ 23 ಮತ್ತು 24 ರಂದು ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಮುಂಜಾನೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button