Belagavi NewsBelgaum NewsKannada NewsKarnataka News

*ಆ.13, 14 ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕಾಗುದೆ. ಆಗಸ್ಟ್ 13 ಮತ್ತು 14 ರಂದು  ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಬಿಳಲಿದೆ ಎಂದು  ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. 

Home add -Advt

ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದ‌ರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14 ರಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆಗಸ್ಟ್ 13 ರಂದು ಮೋಡಕವಿದ ವಾತಾವರಣದೊಂದಿಗೆ ಜಿಟಿಜಿಟಿ ಅಥವಾ ಹಗುರ ಮಳೆಯಾಗಲಿದೆ. ಆಗಸ್ಟ್ 14 ರ ನಂತರ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದ್ದು ಕೆಲವು ಕಡೆಗಳಲ್ಲಿ ಸಾಧಾರಣ ಜಿಟಿಜಿಟಿ ಮಳೆ ಮುಂದುವರಿಯಲಿದೆ.

Related Articles

Back to top button