ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ಅಪರೂಪದಲ್ಲೇ ಅಪರೂಪದ ಪ್ರಕರಣದಲ್ಲಿ ಗ್ರಾಮ ಪಂಚಾಯಿತಿಯೊಂದಕ್ಕೆ ಪತ್ನಿ ಅಧ್ಯಕ್ಷೆಯಾಗಿ, ಪತಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವರೂರು ಗರಾಮ ಪಂಚಾಯಿತಿಯಲ್ಲಿ ಈ ವಿದ್ಯಮಾನ ನಡೆದಿದ್ದು, ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಶಾಲಾಕ್ಷಿ ಚನ್ನಬಸಗೌಡ ಹನುಮಂತಗೌಡರ್ ಉಪಾಧ್ಯಕ್ಷೆಯಾಗಿ, ಚನ್ನಬಸಗೌಡ ಚನ್ನಬಸನಗೌಡರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪತ್ನಿ 1ನೇ ವಾರ್ಡ್ ನಿಂದ ಹಾಗೂ ಪತಿ 2ನೇ ವಾರ್ಡ್ ನಿಂದ ಆಯ್ಕೆಯಾಗಿದ್ದಾರೆ.
ಊರಿನ ಜನರೇ ಒತ್ತಾಯ ಮಾಡಿ ನಮ್ಮನ್ನು ಚುನಾವಣೆಗೆ ನಿಲ್ಲಿಸಿದ್ದರು. ಅಲ್ಲದೆ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಕೂಡ ಜನರೇ ಒತ್ತಾಯ ಮಾಡಿ ಆಯ್ಕೆ ಮಾಡಿದ್ದಾರೆ ಎಂದು ಪತಿ, ಪತ್ನಿ ಪ್ರತಿಕ್ರಿಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ