
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಬಿಜೆಪಿ ಎಂಎಲ್ ಸಿ ರವಿಕುಮಾರ್ ನೀಡಿರುವ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರವಿಕುಮಾರ್ ಅವರಿಗೆ ನಾಲಿಗೆ ಜಾಸ್ತಿಯಾಗಿದೆ ಎಂದು ಕಿಡಿಕಾರಿದ್ದಾರೆ.
ವಿಧಾನಸೌಧದ ಬಳಿ ತಮ್ಮ ಕಾರಿನಿಂದ ಇಳಿಯುತ್ತಿದ್ದ ವೇಳೆ ರವಿಕುಮಾರ್ ಸಿಎಸ್ ಅವರಿಗೆ ಅವಮಾನ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳುತ್ತಿದ್ದಂತೆ, ರವಿಕುಮಾರ್ ಅವರಿಗೆ ನಾಲಿಗೆ ಉದ್ದವಾಗಿದೆ ಎಂದು ಗರಂ ಆದರು.