Kannada NewsKarnataka NewsLatest

*ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿಯ ಲಕಮಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿ ಲಲಿತವ್ವಳನ್ನು ಹತ್ಯೆಗೈದ ಪತಿ ಸಿದ್ದಪ್ಪ ಡಬ್ಬಣ್ಣವರ್ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪತಿ-ಪತ್ನಿ ನಡುವೆ ನಿನ್ನೆ ರಾತ್ರಿ ಜಗಳವಾಗಿತ್ತು. ಕೋಪದಲ್ಲಿ ಪತ್ನಿಯನ್ನು ಕೊಲೆಗೈದಿರುವ ಸಿದ್ದಪ್ಪ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button