*ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಲಕಮಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿ ಲಲಿತವ್ವಳನ್ನು ಹತ್ಯೆಗೈದ ಪತಿ ಸಿದ್ದಪ್ಪ ಡಬ್ಬಣ್ಣವರ್ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತಿ-ಪತ್ನಿ ನಡುವೆ ನಿನ್ನೆ ರಾತ್ರಿ ಜಗಳವಾಗಿತ್ತು. ಕೋಪದಲ್ಲಿ ಪತ್ನಿಯನ್ನು ಕೊಲೆಗೈದಿರುವ ಸಿದ್ದಪ್ಪ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt *ಧರ್ಮಸ್ಥಳ … Continue reading *ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ*