Belagavi NewsBelgaum News

*ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಮಕ್ಕಳ ಕಣ್ಣೆದುರೇ ಪತ್ನಿಯನ್ನು ಹೊಡೆದುಕೊಂದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿಮಹಾಶಯನೊಬ್ಬ ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ.

Home add -Advt

ಫಕೀರವ್ವ ಕಾಕಿ (36) ಕೊಲೆಯಾದ ಮಹಿಳೆ. ಯಲ್ಲಪ್ಪ ಪತ್ನಿಯನ್ನೇ ಕೊಂದ ಆರೋಪಿ. ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ಪತಿ ಯಲ್ಲಪ್ಪ, ಪತ್ನಿ ಮಲಗಿದ್ದಾಗ ಸಲಾಕೆಯಿಂದ ಹೊಡೆದು ಆಕೆಯನ್ನು ಕೊಲೆಗೈದಿದ್ದಾನೆ.

ಮಕ್ಕಳ ಕಣ್ಣೆದುರೆ ಯಲ್ಲಪ್ಪ ಪತ್ನಿಯನ್ನು ಹೊಡೆದು ಸಾಯಿಸಿದ್ದು, ಬಳಿಕ ಪರಾರಿಯಾಗಿದ್ದಾನೆ. ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಯಲ್ಲಪ್ಪನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Related Articles

Back to top button